ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿದ್ಯಾರ್ಥಿನಿ ಮೇಲೆ ಹಿರಿಯ ವಿದ್ಯಾರ್ಥಿಗಳಿಂದಲೇ ಅತ್ಯಾಚಾರ

ತಮಿಳುನಾಡಿನಲ್ಲಿ ಕಿರಿಯ ವಿದ್ಯಾರ್ಥಿನಿಯ ಮೇಲೆ ಹಿರಿಯ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

Srinivasa Murthy VN
Updated On : 2 Mar 2014, 2:58 am

ಕೊಯಂಬತ್ತೂರು: ತಮಿಳುನಾಡಿನಲ್ಲಿ ಕಿರಿಯ ವಿದ್ಯಾರ್ಥಿನಿಯ ಮೇಲೆ ಹಿರಿಯ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಹಿರಿಯ ವಿದ್ಯಾರ್ಥಿಗಳನ್ನು ವಿದ್ಯಾರ್ಥಿನಿ ಓದುತ್ತಿರುವ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ಇಬ್ಬರು ಸಹೋದರರು ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪರಿಚಯವಾದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆಸಿಕೊಂಡ ದೂರ್ತ ಸಹೋದರರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಪ್ರಕರಣ ಸಂಬಂಧ ವಿದ್ಯಾರ್ಥಿನಿಯು ಕೊಯಂಬತ್ತೂರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿರುವ ಪೊಲೀಸರು ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವ ನಾಪತ್ತೆಯಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement