ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಂಕಿತ ಇಂಡಿಯನ್ ಮುಜಾಹಿದ್ದೀನ್ ಉಗ್ರನ ಬಂಧನ

ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಶಂಕಿತ ಉಗ್ರನೊಬ್ಬನನ್ನು ಬಿಹಾರದ ಅರ್ವಾಲ್ ಪ್ರಾಂತ್ಯದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಬಂಧಿಸಿದ್ದಾರೆ.

Srinivasa Murthy VN
Updated On : 2 Mar 2014, 7:20 am

ಅರ್ವಾಲ್: ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಶಂಕಿತ ಉಗ್ರನೊಬ್ಬನನ್ನು ಬಿಹಾರದ ಅರ್ವಾಲ್ ಪ್ರಾಂತ್ಯದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಆಗಿಲಾ ಗ್ರಾಮದ ಮಹಮದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಕಳೆದ ವರ್ಷ ಬೋಧ್‌ಗಯಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನ ಕೈವಾಡವಿರಬಹುದು ಎಂದು ಎನ್‌ಐಎ ಅಧಿಕಾರಿಗಳು ಶಂಕಿಸಿದ್ದಾರೆ. ಬಂಧನದ ನಂತರ ಶಂಕಿತ ಉಗ್ರ ಇರ್ಫಾನ್‌ನನ್ನು ಭಾರಿ ಭದ್ರತೆಯೊಂದಿಗೆ ಪಾಟ್ನಾಗೆ ಕರೆತರಲಾಗಿದೆ.

ಬೋಧ್‌ಗಯಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈತನ ಕೈವಾಡವಿರುವ ಕುರಿತು ಕೆಲ ಸಾಕ್ಷಿಗಳು ಲಭ್ಯವಾಗಿವೆ. ಹೀಗಾಗಿ ಈತನನ್ನು ಹೆಚ್ಚಿನ ವಿಚಾರಣೆಗಾಗಿ ಪಾಟ್ನಾಗೆ ಕರೆತರಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಷಫಿ ಉಲ್ ಹಕ್ ತಿಳಿಸಿದ್ದಾರೆ.

ಕಳೆದ 2013 ಜುಲೈ 7ರಂದು ಪವಿತ್ರ ಯಾತ್ರಾ ಸ್ಥಳ ಬೋಧ್‌ಗಯಾದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಪ್ರಸ್ತುತ ಪ್ರಕರಣ ಸಂಬಂಧ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement