ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ, ನ್ಯಾಯಾಧೀಶ ಸೇರಿ 11 ಸಾವು
ಪಾಕಿಸ್ತಾನದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿದಲ್ಲಿ ನ್ಯಾಯಾಧೀಶರು ಸೇರಿದಂತೆ 11 ಮಂದಿ ಸೋಮವಾರ ದುರ್ಮರಣ ಹೊಂದಿದ್ದಾರೆ...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ನ್ಯಾಯಾಧೀಶರು ಸೇರಿದಂತೆ 11 ಮಂದಿ ಸೋಮವಾರ ದುರ್ಮರಣ ಹೊಂದಿದ್ದಾರೆ.
ಇಂದು ಬೆಳಗ್ಗೆ ಇಸ್ಲಾಮಾಬಾದ್ನ ಜಿಲ್ಲಾ ಕೋರ್ಟ್ಗೆ ಆಗಮಿಸಿದ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಈ ದಾಳಿಯಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ 30 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವು ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಫೋಟದ ತೀವ್ರತೆಗೆ ಕೋರ್ಟ್ನ ಕಟ್ಟಡ ಬಿರುಕು ಬಿಟ್ಟಿದ್ದು, ಕಿಟಕಿ ಬಾಗಿಲುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಬಾಂಬ್ ದಾಳಿ ನಡೆಸಿದ ಬಳಿಕ ಉಗ್ರರು ಕೋರ್ಟ್ ನ ಒಳಗೆ ಅಡಗಿ ಕುಳಿತ್ತಿದ್ದು, ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಿಕಿ ನಡೆಯುತ್ತಿದೆ.