ಅಂಬಿಯನ್ನು ರಾಜಕೀಯಕ್ಕೆ ಕರೆತಂದಿದ್ದು ನನ್ನ ತಂದೆ: ರಮ್ಯಾ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಹಾಗೂ...
ಮಂಡ್ಯ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಬಗ್ಗೆ ನಟಿ ಹಾಗೂ ಸಂಸದೆ ರಮ್ಯಾ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಅಂಬರೀಷ್ ಅವರ ದೇಹದಿಂದ 10 ಲೀಟರ್ ನೀರು ಹೊರತೆಗೆಯಲಾಗಿದೆ ಎಂದು ಹೇಳಿದ್ದ ರಮ್ಯಾ, ಈಗ ಅಂಬಿ ಅಂಕಲ್ರನ್ನು ರಾಜಕೀಯಕ್ಕೆ ಕರೆತಂದಿದ್ದು ನನ್ನ ತಂದೆ ಎಂದು ಹೇಳಿದ್ದಾರೆ. ರಮ್ಯಾ ಅವರ ಈ ಹೇಳಿಕೆಗೆ ಅಂಬರೀಷ್ ಅವರ ಅಭಿಮಾನಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಇಂದು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ, ನನ್ನ ತಂದೆ ಆರ್.ಟಿ.ನಾರಾಯಣ್ ಅವರು ಅಂಬರೀಷ್ರನ್ನು ರಾಜಕೀಯಕ್ಕೆ ಕರೆತಂದಿದ್ದರು ಎಂದು ತಿಳಿಸಿದ್ದಾರೆ.