ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ; ತಡೆಯಾಜ್ಞೆ ತೆರವು
ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ನಡೆಸಿದ್ದ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್...
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ನಡೆಸಿದ್ದ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.
2012 ಜನವರಿ 27ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದರೂ ಎಸ್ಸೆಂ ಕೃಷ್ಣ ವಿರುದ್ಧದ ತಡೆಯಾಜ್ಞೆ ಮುಂದುವರಿಕೆಯಾಗಲಿದೆ.
ಆದಾಗ್ಯೂ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಧರಂ ಸಿಂಗ್, ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ 11 ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ಅಬ್ರಾಹಿಂ ನೀಡಿದದೂರಿನ ಮೇರೆಗೆಧರಂ ಸಿಂಗ್ಮತ್ತು ಕುಮಾರಸ್ವಾಮಿವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ.