ಬೆಂ.ಉತ್ತರದಿಂದ ಡಿವಿಎಸ್ ಸ್ಪರ್ಧೆ ಸಾಧ್ಯತೆ
ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಪರವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಪರವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಪರವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅವರಿಗೆ ತೀವ್ರ ಪೈಪೋಟಿ ನೀಡಿದ್ದ ಸ್ಥಳೀಯ ಮುಖಂಡ ಆರ್.ಅಶೋಕ್ ಅವರು ಕಣದಿಂದ ಹಿಂದೆ ಸರಿದಿದ್ದರಿಂದ ಡಿವಿಎಸ್ ಹಾದಿ ಸುಗಮವಾದಂತಾಗಿದೆ.
ಇಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ನಿವಾಸದಲ್ಲಿ ನಡೆದ ಬೆಂಬಲಿಗರ ಸಭೆ ಬಳಿಕ ನಿರ್ಧಾರ ಪ್ರಕಟಿಸಿರುವ ಅಶೋಕ್ ಅವರು, ತಾವು ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಶೀಘ್ರದಲ್ಲಿಯೇ ಈ ಬಗ್ಗೆ ಬಿಜೆಪಿ ಹೈಕಮಾಂಡ್ ನೊಂದಿಗೆ ಚರ್ಚಿಸಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಅಂತೆಯೇ ನಾಳೆ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅಶೋಕ್ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.