ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸುಪ್ರೀಂ ಕೋರ್ಟ್ ಕ್ಷಮೆ ಕೇಳಿದ ಸುಬ್ರತೋ

ಕಳೆದ ಬುಧವಾರ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದಕ್ಕೆ ಸಹಾರ ಮುಖ್ಯಸ್ಥ ಸುಬ್ರತೋ ರಾಯ್ ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆ...

Rashmi Kasaragodu
Updated On : 4 Mar 2014, 3:27 am

ನವದೆಹಲಿ: ಕಳೆದ ಬುಧವಾರ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದಕ್ಕೆ ಸಹಾರ ಮುಖ್ಯಸ್ಥ ಸುಬ್ರತೋ ರಾಯ್ ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆ ಕೇಳಿದ್ದಾರೆ.
 
ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರಾದ ರಾಯ್ ತಾನು ಸಕಾರಣದಿಂದ ಹಾಜರಾಗಲಿಲ್ಲ ಎಂದು ಹೇಳಿದ್ದಾರೆ.

ರಾಯ್ ಅವರ ಕ್ಷಮೆಯಾಚನೆಗೆ ಸ್ವೀಕರಿಸಿ ಪ್ರತಿಕ್ರಿಯಿಸಿದ ನ್ಯಾಯಾಲಯ, ನಾವು ನಿಮ್ಮನ್ನು ಗೌರವಿಸುತ್ತೇವೆ, ಆದರೆ ನಮಗೆ ನೀವು ಗೌರವ ನೀಡುವಲ್ಲಿ ವಿಫಲರಾಗಿದ್ದೀರಿ ಎಂದು ಹೇಳಿದೆ.


ಅದೇ ವೇಳೆ ತಾನು ಹೂಡಿಕೆದಾರರಿಗೆ ಷೇರುಗಳನ್ನು ಹಿಂದಿರುಗಿಸುವುದಾಗಿ ರಾಯ್ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಹಾರಾ ಸಂಸ್ಥೆಯ ಹೂಡಿಕೆದಾರರ 20,000 ಕೋಟಿ ಮೌಲ್ಯದ ಷೇರುಗಳನ್ನು ಹಿಂದಿರುಗಿಸಲು ವಿಫಲರಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ನ್ಯಾಯಾಲಯದ ಮುಂದೆ ಅವರು ಹಾಜರಾಗಲು ವಿಫಲರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

ಇಷ್ಟೆಲ್ಲಾ ಆದ ಮೇಲೆ ರಾಯ್ ಅವರು ಶುಕ್ರವಾರ ಲಕ್ನೋದಲ್ಲಿ ಪೊಲೀಸರಿಗೆ ಶರಣಾಗಿದ್ದು, ಇಂದು ಅಪರಾಹ್ನ 2 ಗಂಟೆಗೆ ಕೋರ್ಟ್‌ಗೆ ಹಾಜರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement