ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕರ್ನಾಟಕದಲ್ಲಿ ಏ.17ಕ್ಕೆ ಎಂ.ಪಿ.ಚುನಾವಣೆ

2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 17ರಂದು..

Lingaraj Badiger
Updated On : 5 Mar 2014, 12:04 pm

ನವದೆಹಲಿ: 2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಲೋಕಸಭೆ ಚುನಾವಣೆಗಾಗಿ ಮಾರ್ಚ್ 19ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಇನ್ನು ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕಡೆಯ ದಿನವಾಗಿದ್ದು, ಏಪ್ರಿಲ್ 17ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಸುಮಾರು ಒಂದು ತಿಂಗಳ ಬಳಿಕ ಅಂದರೆ, ಮೇ. 16ಕ್ಕೆ ಲೋಕಸಮರದ ಮಹಾ ಫಲಿತಾಂಶ ಪ್ರಕಟಗೊಳ್ಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement