ಬಿಜೆಪಿ ಸೇರಲು ಶ್ರೀರಾಮುಲು ನಿರ್ಧಾರ
ಬಿಜೆಪಿ ಸೇರಲು ಶ್ರೀರಾಮುಲು ನಿರ್ಧಾರ
ಬಳ್ಳಾರಿ: ಬಿಜೆಪಿಯೊಂದಿಗೆ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ವಿಲೀನಗೊಳಿಸುವುದಾಗಿ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ, ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಬುಧವಾರ ಘೋಷಿಸಿದ್ದಾರೆ.
ಮಾಜಿ ಪ್ರಧಾನಿ ವಾಜಪೇಯಿ ನಂತರ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶಕಂಡ ಶ್ರೇಷ್ಠ ವ್ಯಕ್ತಿಯಾಗಿದ್ದು, ಅವರನ್ನು ಪ್ರಧಾನಿ ಮಾಡುವುದಕ್ಕಾಗಿ ಬಿಜೆಪಿಗೆ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಧಾರೆ ಎರೆಯುತ್ತೇನೆ ಮತ್ತು ಮೋದಿ ಪ್ರಧಾನಿಯಾಗಲು ತಾವು ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಬಿಎಸ್ಆರ್ ಕಾಂಗ್ರೆಸ್ನ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಮುಲು ಹೇಳಿದ್ದಾರೆ.
ಇದೇ ವೇಳೆ ತಾವು ಬಿಜೆಪಿಗೆ ಹೋದರು ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ಕೊಡಿಸುವುದಾಗಿ ಶ್ರೀರಾಮುಲು ಭರವಸೆ ನೀಡಿದ್ದಾರೆ.