ದೇವೇಗೌಡರ ಪರ ಷರೀಫ್ ಬ್ಯಾಟಿಂಗ್
ಹಾಸನದಿಂದ ದೇವೇಗೌಡರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕ ಜಾಫರ್...
ನವದೆಹಲಿ: ಹಾಸನದಿಂದ ದೇವೇಗೌಡರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಹೇಳಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಷರೀಫ್ ಪತ್ರ ಬರೆದಿದ್ದಾರೆ. ದೇವೇಗೌಡರಿಗೆ ಇದು ಕೊನೆಯ ಚುನಾವಣೆ . ಆದ್ದರಿಂದ ಅವರ ವಿರುದ್ಧ ಕಾಂಗ್ರೆಸ್ ಅಭ್ಯಥಿಯನ್ನು ಕಣಕ್ಕಿಳಿಸುವುದು ಬೇಡ ಎನ್ನುವ ಮೂಲಕ ಷರೀಫ್ ದೇವೇಗೌಡರ ಮೇಲೆ ರಾಜಕೀಯ ಪ್ರೀತಿ ವ್ಯಕ್ತ ಪಡಿಸಿದ್ದಾರೆ.