ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಕೋಮುವಾದಿ: ಮಮತಾ ಬ್ಯಾನರ್ಜಿ

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೋಮುವಾದಿಯಾದ್ದರಿಂದ ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳದ...

Mainashree
Updated On : 7 Mar 2014, 12:13 pm

ಕೊಲ್ಕತಾ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೋಮುವಾದಿಯಾದ್ದರಿಂದ ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.

2014ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಿರುವ ಮಮತಾ, ಮೋದಿ ಕೋಮುವಾದಿಯಾಗಿದ್ದಾರೆ. ಆದ್ದರಿಂದ ಅವರಿಗೆ ತೃಣಮೂಲ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅಥವಾ ಬಿಎಸ್‌ಪಿ ನಾಯಕಿ ಮಾಯಾವತಿ ಅವರಿಗೆ ಬೆಂಬಲಿಸಲಿದೆ ಹೊರತು. ಮೋದಿಗಲ್ಲ ಎಂದು ಮಮತಾ ಹೇಳಿದ್ದಾರೆ.

ಕುರ್ಚಿ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಬಗ್ಗೆ ಚಿಂತಿಸುವುದು ನನಗೆ ಮುಖ್ಯವಾಗಿದೆ. ಮಾಯಾವತಿ ಅಥವಾ ಜಯಲಲಿತಾ ಪ್ರಧಾನಿಯಾಗಬೇಕೆಂದಿದ್ದರೇ ಅವರಿಗೆ ನಾನು ಬೆಂಬಲಿಸುತ್ತೇನೆ ಎಂದು ಮಮತಾ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement