ಆಪ್ ಮುಖಂಡ ಯೋಗೇಂದ್ರ ಯಾದವ್ ಮುಖಕ್ಕೆ ಮಸಿ
ಆಮ್ ಆದ್ಮಿ ಪಕ್ಷದ ನಾಯಕ ಯೋಗೇಂದ್ರ ಯಾದವ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಮಸಿ ಎರಚಿದ್ದಾನೆ...
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಯೋಗೇಂದ್ರ ಯಾದವ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಮಸಿ ಎರಚಿದ್ದಾನೆ.
ದೆಹಲಿಯ ಜಂತರ್ ಮಂತರ್ನಲ್ಲಿ ಆಮ್ ಆದ್ಮಿ ಪಕ್ಷ ರ್ಯಾಲಿ ನಡೆಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಯೋಗೇಂದ್ರ ಯಾದವ್ ಅವರ ಮುಖಕ್ಕೆ ಮಸಿ ಎರಚಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಪ್ರತಿಕ್ರಯಿಸಿದ ಯೋಗೇಂದ್ರ ಯಾದವ್, ಮಸಿ ಎರಚಿದಕ್ಕೆ ನನಗೆ ಬೇಜಾರಿಲ್ಲ. ಮಸಿ ಬಳಿದವನಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಹೇಳಿದ್ದಾರೆ.