ಕೆಎಸ್‌ಆರ್‌ಟಿಸಿ ಕಚೇರಿಯಲ್ಲಿ ಸಾಧಕಿಯರಿಗೆ ಸನ್ಮಾನ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಮಹಿಳೆಯರಿಗೆ ಹಾಗೂ...
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಮಹಿಳೆಯರಿಗೆ ಹಾಗೂ ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳನ್ನು ಶನಿವಾರ ಸನ್ಮಾನಿಸಲಾಯಿತು.
ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಐವರು ಸಾಧಕಿಯರು, ನಿರ್ವಾಹಕಿ, ಓರ್ವ ಮಹಿಳಾ ತಾಂತ್ರಿಕ ಸಿಬ್ಬಂದಿ ಹಾಗೂ ನಿವೃತ್ತ ಮಹಿಳಾ ಸಿಬ್ಬಂದಿಗಳನ್ನು ರಾಷ್ಟ್ರಪತಿ ಬೆಳ್ಳಿ ಪದಕ ವಿಜೇತೆ ನಂದನ ಕೃಷ್ಣಕುಮಾರ ಅವರು ಸನ್ಮಾನಿಸಿದರು.