ಚು. ಆಯೋಗಕ್ಕೆ ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕಾಂಗ್ರೆಸ್ ...
ನವದೆಹಲಿ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಗಾಂಧಿ ಹತ್ಯೆಯ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ಇದು ವಿವಾದ ಸೃಷ್ಟಿಸಿತ್ತು.
ರಾಹುಲ್ ಹೇಳಿಕೆಯ ಬಗ್ಗೆ ಚುನಾವಣಾ ಆಯೋಗದ ಕಮಿಷನರ್ ವಿ.ಎಸ್ ಸಂಪತ್ ಅವರಿಗೆ ದೂರು ನೀಡಿದ ಬಿಜೆಪಿ ರಾಹುಲ್ ಮತ್ತು ಅವರ ಪಕ್ಷ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿದೆ. ಈ ಬಗ್ಗೆ ರಾಹುಲ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಆಯೋಗಕ್ಕೆ ಮನವಿ ಸಲ್ಲಿಸಿದೆ.