ಕಲ್ಲಿದ್ದಲು ಹಂಚಿಕೆ ಹಗರಣ: ಚಾರ್ಜ್‌ಶೀಟ್ ದಾಖಲಿಸಿದ ಸಿಬಿಐ
ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ ಚಾರ್ಜ್‌ಶೀಟ್...
ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.
ಮೋಸ ಮತ್ತು ಒಳಸಂಚು ಆರೋಪದಡಿ ನವಭಾರತ್ ಪವರ್ ಪ್ರೈವೇಟ್ ಲಿಮಿಟೆಡ್ ಮತ್ತು ಕಂಪನಿಯ ಇಬ್ಬರು ನಿರ್ದೇಶಕರ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ.
ಸಿಬಿಐ ಒಟ್ಟು 16 ಎಫ್‌ಐಆರ್ ದಾಖಲಿಸಿದ್ದು, ಎಎಂಆರ್ ಐರನ್ ಅಂಡ್ ಸ್ಟೀಲ್, ಜೆಎಲ್‌ಡಿ ಯಾವಟ್ಮಾಲ್ ಎನರ್ಜಿ, ವಿನಿ ಐರನ್ ಅಂಡ್ ಸ್ಟೀಲ್ ಉದ್ಯೋಗ್, ಜೆಎಎಸ್ ಇನ್ಫ್ರಾಸ್ಟ್ರಕ್ಚರ್ ಕಾಪಿಟಲ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಅನೇಕ ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಸಿಬಿಐ ಎಫ್‌ಐಆರ್ ದಾಖಲಿಸಿದೆ, ತನಿಖೆಯ ಪ್ರಕಾರ ಸರ್ಕಾರಕ್ಕೆ ಈ ಕಂಪನಿಗಳಿಂದ 1.86 ಕೋಟಿ ನಷ್ಟಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.