ಬಡವರಿಗಾಗಿ ಕಾಂಗ್ರೆಸ್ ಸರ್ಕಾರ: ರಾಹುಲ್
ಕಾಂಗ್ರೆಸ್ ಬಡವರಿಗಾಗಿ ಸರ್ಕಾರ ನಡೆಸಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ...
ರಾಜಸ್ಥಾನ: ಕಾಂಗ್ರೆಸ್ ಬಡವರಿಗಾಗಿ ಸರ್ಕಾರ ನಡೆಸಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ಕಾಂಗ್ರೆಸ್ ಬಡವರಿಗಾಗಿ ಸರ್ಕಾರ ನಡೆಸಲಿದೆ ಎಂದು ರಾಹುಲ್ ತಿಳಿಸಿದ್ದಾರೆ.
ರಾಜಸ್ಥಾನದ ಟಾಂಗ್ ಜಿಲ್ಲೆಯ ದಿವಾಲಿ ಎಂಬ ಗ್ರಾಮದಲ್ಲಿ ಕೈಗೊಂಡಿದ್ದ ಕಾಂಗ್ರೆಸ್ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್, ಕಳೆದ 10 ವರ್ಷದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ 150 ಮಿಲಿಯನ್ ಜನರು ಬಡತನ ರೇಖೆಯಿಂದ ಹೊರ ಬಂದಿದ್ದಾರೆ ಎಂದು ಹೇಳಿದ್ದಾರೆ.
ಆದರೆ ದೇಶದಲ್ಲಿ ಇನ್ನೂ 700 ಮಿಲಿಯನ್ ಜನರು ಬಡತನ ರೇಖೆಯಲ್ಲಿದ್ದು, ಅವರ ಅಭಿವೃದ್ಧಿಯಾಗಬೇಕಿದೆ. ಆದರೆ ಇದಕ್ಕೆ ಅಧಿಕಾರ ಬೇಕು. ಇಲ್ಲಿನ ಜನ ಕಾಂಗ್ರೆಸ್‌ಗೆ ಮತ್ತೊಮ್ಮೆ ಅಧಿಕಾರ ನೀಡಿದರೇ, ಮತ್ತಷ್ಟು ಜನರನ್ನು ಬಡತನ ರೇಖೆಯಿಂದ ಹೊರತರಲು ದುಡಿಯುತ್ತದೆ ಎಂದು ರಾಹುಲ್ ಭರವಸೆ ನೀಡಿದ್ದಾರೆ.
ರಾಜಸ್ಥಾನ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಬಿಜೆಪಿ ಕಣ್ಣಿಗೆ ಕಾಣುತ್ತಿಲ್ಲ. ಪರೋಕ್ಷವಾಗಿ ಭ್ರಷ್ಟಚಾರಕ್ಕೆ ಬೆಂಬಲಿಸುತ್ತಿದೆ. ಆದರೆ ಕಾಂಗ್ರೆಸ್ ಇದಕ್ಕೆ ತಡೆಹಾಕಲಿದೆ. ಭ್ರಷ್ಟಾಚಾರವನ್ನು ಹತ್ತಿಕ್ಕಲಿದೆ ಎಂದು ರಾಹುಲ್ ತಿಳಿಸಿದ್ದಾರೆ.