ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಭೆ ಚುನಾವಣೆ ದಿನಾಂಕ ಬದಲಾವಣೆಗೆ ರಾಜ್ಯ ಬಿಜೆಪಿ ಮನವಿ

ರಾಜ್ಯದಲ್ಲಿ ಏಪ್ರಿಲ್ 17ರಂದು ನಿಗದಿಯಾಗಿರುವ ಲೋಕಸಭೆ ಚುನಾವಣೆ ದಿನಾಂಕವನ್ನು ಬದಲಾವಣೆ ಮಾಡುವಂತೆ..

Lingaraj Badiger
Updated On : 10 Mar 2014, 4:58 am

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 17ರಂದು ನಿಗದಿಯಾಗಿರುವ ಲೋಕಸಭೆ ಚುನಾವಣೆ ದಿನಾಂಕವನ್ನು ಬದಲಾವಣೆ ಮಾಡುವಂತೆ ರಾಜ್ಯ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಸೋಮವಾರ ಮನವಿ ಮಾಡಿದೆ.

ಏಪ್ರಿಲ್ 17 ಗುರುವಾರವಾಗಿದ್ದು, ನಂತರ ಗುಡ್‌ಫ್ರೈಡೇ ನಿಮಿತ್ತ ಶುಕ್ರವಾರ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ಶನಿವಾರ ಭಾನುವಾರ ಐಟಿ-ಬಿಟಿ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ರಜೆ ಇದೆ. ಹೀಗೆ ಸಾಲು ಸಾಲು ಸರ್ಕಾರಿ ರಜೆ ಇರುವುದರಿಂದ ಕಡಿಮೆ ಮತದಾನವಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಮತದಾನದ ದಿನಾಂಕವನ್ನು ಬದಲಾವಣೆ ಮಾಡುವಂತೆ ಮಾಜಿ ಸಚಿವ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನಿಲ್ ಕುಮಾರ್ ಝಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅಲ್ಲದೆ ಚುನಾವಣಾ ದಿನಾಂಕವನ್ನು ಏಪ್ರಿಲ್ 22 ಅಥವಾ 23ಕ್ಕೆ ನಿಗದಿಪಡಿಸುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಅಶ್ವತ್ ನಾರಾಯಣ ಹಾಗೂ ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ಎಸ್. ಪ್ರಕಾಶ್ ಅವರು ಈ ವೇಳೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement