ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಾಸಕ, ಸಂಸದರ ಪ್ರಕರಣಗಳ ವಿಚಾರಣೆಗೆ 1 ವರ್ಷ ಗಡುವು

ಶಾಸಕ ಹಾಗೂ ಸಂಸದರ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದೊಳೆಗೆ ಮುಕ್ತಾಯಗೊಳಿಸುವಂತೆ..

Lingaraj Badiger
Updated On : 10 Mar 2014, 1:20 am

ನವದೆಹಲಿ: ಶಾಸಕ ಹಾಗೂ ಸಂಸದರ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದೊಳೆಗೆ ಮುಕ್ತಾಯಗೊಳಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಶಾಸಕ ಹಾಗೂ ಸಂಸದರು ಎದುರಿಸುತ್ತಿರುವ ಭ್ರಷ್ಟಾಚಾರ, ಅತ್ಯಾಚಾರ ಹಾಗೂ ಇತರೆ ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಕ್ತಾಗೊಳಿಸುವಂತೆ ಸುಪ್ರೀಂ ಕೋರ್ಟ್ ದೇಶದ ಎಲ್ಲ ಕೆಳ ನ್ಯಾಯಾಲಯಗಳಿಗೆ ಆದೇಶಿಸಿದೆ. ಅಲ್ಲದೆ ಒಂದು ವೇಳೆ ಪ್ರಕರಣದ ವಿಚಾರಣೆ ತಡವಾದಲ್ಲಿ ಆ ಕುರಿತು ಹೈಕೋರ್ಟ್‌ಗೆ ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ.

ರಾಜಕೀಯ ಅಪರಾಧಗಳ ನಿಯಂತ್ರಣ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement