ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇರಳ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಶೀಲಾ ದೀಕ್ಷಿತ್

ಕೇರಳದ ರಾಜ್ಯಪಾಲರಾಗಿ ಮಾಜಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ...

Mainashree
Updated On : 11 Mar 2014, 2:52 am

ತಿರುವನಂತಪುರಂ: ಕೇರಳದ ರಾಜ್ಯಪಾಲರಾಗಿ ಮಾಜಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಿಖಿಲ್ ಕುಮಾರ್ ಎಂಬುವವರು ಕೇರಳದ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ಶೀಲಾ ದೀಕ್ಷಿತ್ ಅವರನ್ನು ಕೇಂದ್ರ ಸರ್ಕಾರ ನೇಮಕಮಾಡಿತು. 1998ರಿಂದ 2013ರವರೆಗೆ ಶೀಲಾ ದೀಕ್ಷಿತ್ ದೆಹಲಿ ಮುಖ್ಯಮಂತ್ರಿಯಾಗಿದ್ದರು. ಇತ್ತೀಚೆಗಷ್ಟೆ ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಇದಾದ ಮೂರೇ ತಿಂಗಳಿಗೆ ದೀಕ್ಷಿತ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement