ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಖ್ಯಾತ ನೀರಾವರಿ ತಜ್ಞ ಪರಮಶಿವಯ್ಯ ನಿಧನ

ಖ್ಯಾತ ನೀರಾವರಿ ತಜ್ಞ ಹಾಗೂ ನೇತ್ರಾವತಿ ನದಿ ತಿರುವು ಯೋಜನೆಯ ಹರಿಕಾರ ಡಾ.ಜಿ.ಎಸ್. ಪರಮಶಿವಯ್ಯ..

Lingaraj Badiger
Updated On : 11 Mar 2014, 12:37 pm

ತುಮಕೂರು: ಖ್ಯಾತ ನೀರಾವರಿ ತಜ್ಞ ಹಾಗೂ ನೇತ್ರಾವತಿ ನದಿ ತಿರುವು ಯೋಜನೆಯ ಹರಿಕಾರ ಡಾ.ಜಿ.ಎಸ್. ಪರಮಶಿವಯ್ಯ(97) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 97 ವರ್ಷದ ಪರಮಶಿವಯ್ಯ ಅವರು ಇಂದು ಮಧ್ಯಾಹ್ನ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪರಮಶಿವಯ್ಯ ಅವರು ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯಕ್ಕಾಗಿ ಹೋರಾಟ ಮಾಡಿದ್ದರು ಮತ್ತು ನೇತ್ರಾವತಿ ನದಿ ತಿರುವು ಯೋಜನೆ ಕುರಿತು ರಾಜ್ಯ ಸರ್ಕಾರ ವರದಿ ನೀಡಿದ್ದರು. ಅಲ್ಲದೆ ಈ ವರದಿಯನ್ನು ಅನುಷ್ಠಾನಗೊಳಿಸದಿದ್ದರೆ ವಿಧಾನಸೌಧ ಮುಂದೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement