ಛತ್ತೀಸ್‌ಗಡ್‌ನಲ್ಲಿ ನಕ್ಸಲ್ ದಾಳಿ: 20 ಸಿಆರ್‌ಪಿಎಫ್ ಯೋಧರು ಸಾವು
ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 20 ಯೋಧರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ...
ರಾಯ್‌ಪುರ್: ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 20 ಯೋಧರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ.
ಛತ್ತೀಸ್‌ಗಡ್‌ನ ಸುಕ್ಮಾ ಜಿಲ್ಲೆಯ ಜಿರಮ್ ಘಾಟಿ ಬಳಿ ಬಳಿ ಭದ್ರತಾ ಸಿಬ್ಬಂದಿಗಳ ಮೇಲೆ ನಕ್ಸಲರು ದಾಳಿ ಮಾಡಿದ್ದಾರೆ. ಈ ವೇಳೆ ಗುಂಡಿನ ಕಾಳಗ ನಡೆದಿದೆ. ನಕ್ಸಲರ ಗುಂಡಿಗೆ 20 ಯೋಧರು ಬಲಿಯಾಗಿದ್ದಾರೆ.
ಇಂದು ಬೆಳಿಗ್ಗೆ ಸುಮಾರು 10.30ರ ಸಮಯದಲ್ಲಿ 150 ನಕ್ಸಲರು 48 ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ 20 ಯೋಧರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವು ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.