ಮಹಾತ್ಮಗಾಂಧಿ ಹತ್ಯೆಯಲ್ಲಿ ಆರ್‌ಎಸ್‌ಎಸ್ ಭಾಗಿಯಾಗಿಲ್ಲ: ಅಡ್ವಾಣಿ
ಮಹಾತ್ಮಗಾಂಧಿ ಹತ್ಯೆಯಲ್ಲಿ ಆರ್‌ಎಸ್‌ಎಸ್ ಭಾಗಿಯಾಗಿಲ್ಲ ಎಂದು ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ ಬುಧವಾರ ಹೇಳಿದ್ದಾರೆ...
ನವದೆಹಲಿ: ಮಹಾತ್ಮಗಾಂಧಿ ಹತ್ಯೆಯಲ್ಲಿ ಆರ್‌ಎಸ್‌ಎಸ್ ಭಾಗಿಯಾಗಿಲ್ಲ ಎಂದು ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ ಬುಧವಾರ ಹೇಳಿದ್ದಾರೆ.
ಮಹಾತ್ಮ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ದಾರ್ ವಲ್ಲಬಾಯ್ ಪಟೇಲ್ ಅವರು ಜವಾಹಾರ್‌ಲಾಲ್ ನೆಹರು ಅವರಿಗೆ ಪತ್ರ ಬರೆದಿದ್ದರು. ಅದನ್ನು ಸ್ಪಷ್ಟವಾಗಿ ಓದಿ ನೋಡಿದರೆ ತಿಳಿಯುತ್ತದೆ, ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಭಾಗಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ವಿನಾ ಕಾರಣ ಆರ್‌ಎಸ್‌ಎಸ್ ಮೇಲೆ ಅಪವಾದ ಹೇರುತ್ತಿದೆ. ಆದರೆ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್‌ನ ಯಾವುದೇ ಪಾತ್ರವಿಲ್ಲ ಎಂದು ಅಡ್ವಾಣಿ ಹೇಳಿದ್ದಾರೆ.