ಮಾಜಿ ಸಂಸದೆ ತೇಜಸ್ವಿನಿ ಬಿಜೆಪಿಗೆ ಸೇರ್ಪಡೆ
ಮಾಜಿ ಸಂಸದೆ ತೇಜಸ್ವಿನಿ ಗೌಡ ಬುಧವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ...
ಬೆಂಗಳೂರು: ಮಾಜಿ ಸಂಸದೆ ತೇಜಸ್ವಿನಿ ಗೌಡ ಬುಧವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ನಿಂದ ಕಡೆಗಣಿಸಲಾಗಿದ್ದ ತೇಜಸ್ವಿನಿ ಗೌಡ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಅವರೊಂದಿಗೆ ಸದಾ ವಿವಾದಕ್ಕೀಡಾಗಿದ್ದ ತೇಜಸ್ವಿನಿ ಅವರನ್ನು ಕಾಂಗ್ರೆಸ್ನಲ್ಲಿ ಮೂಲೆಗುಂಪು ಮಾಡಲಾಗಿತ್ತು.
ಕಳೆದ ವಿಧಾನಸಭೆ ಚುನಾವಣೆಯಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಈ ಬಾರಿಯಾದರು ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ಗಾಗಿ ಹೈಕಮಾಂಡ್ ಮೊರೆ ಹೋಗಿದ್ದರು. ಆದರೆ, ಈ ಮೊದಲೇ ಹೈಕಮಾಂಡ್ ನಂದನ್ ನೀಲಕೇಣಿ ಅವರನ್ನು ನಿಲ್ಲಿಸಬೇಕು ಎಂದು ನಿರ್ಧರಿಸಿತ್ತು. ಈ ಹಿನ್ನಲೆಯಲ್ಲಿ ತೇಜಸ್ವಿನಿ ಅವರಿಗೆ ನಿರಾಶೆಯಾಗಿದೆ ಎಂದು ಹೇಳಲಾಗಿತ್ತು.
ಆದರೆ ಇಂದು ತೇಜಸ್ವಿನಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಎಂಬುದು ಕಾದು ನೋಡಬೇಕಿದೆ.