ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ...
ಉತ್ತರಪ್ರದೇಶ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬುಧವಾರ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಮಹಾತ್ಮ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರ್ಎಸ್ಎಸ್ ಪಾತ್ರವಿದೆ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹಿನ್ನಲೆಯಲ್ಲಿ ವಕೀಲ ಶನು ಶುಕ್ಲಾ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಎಫ್ಐಆರ್ ದಾಖಲಿಸುವಂತೆ ಆದೇಶಿಸಿ ಎಂದು ಕೋರಿ ಲಕೀಂಪುರ್ ಕೇಡಿರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 4ರಂದು ನ್ಯಾಯಾಮೂರ್ತಿ ಪಿ ಶ್ರೀವಾಸ್ತವ್ ಕೈಗೆತ್ತಿಕೊಳ್ಳಲಿದ್ದಾರೆ.
ಗಾಂಧಿ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಅನೇಕ ತನಿಖೆಗಳು ನಡೆದಿದ್ದು, ಆರ್ಎಸ್ಎಸ್ ನ ಯಾವುದೇ ಪಾತ್ರವಿಲ್ಲ ಎಂದು ದೃಢಪಟ್ಟಿದೆ. ಆದರೆ ರಾಹುಲ್ ಗಾಂಧಿ ಅವರು ಆರ್ಎಸ್ಎಸ್ ಮೇಲೆ ಸುಳ್ಳು ಆರೋಪ ಮಾಡಿದ್ದು, ಇದರಿಂದ ಆರ್ಎಸ್ಎಸ್ಗೆ ಧಕ್ಕೆಯುಂಟಾಗಿದೆ. ಆದ್ದರಿಂದ ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.