ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಹರಾ ಗ್ರೂಪ್ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸಹರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಸಲ್ಲಿಸಿದ ಅರ್ಜಿ...

Mainashree
Updated On : 12 Mar 2014, 1:49 am

ನವದೆಹಲಿ: ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸಹರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.

ಇಂದು ಮಧ್ಯಾಹ್ನ 2 ಗಂಟಗೆ ಅರ್ಜಿ ವಿಚಾರಣೆ ನಡೆಸಲಾಗುತ್ತದೆ ಎಂದು ಮುಖ್ಯ ನ್ಯಾಯಾಮೂರ್ತಿ ಪಿ. ಸತಾಶಿವಂ ಅವರನ್ನೊಳಗೊಂಡ ನ್ಯಾಯಾಪೀಠ ಹೇಳಿದೆ.

ತನ್ನ ಹೂಡಿಕೆದಾರರಿಗೆ ಹಣ ಹಿಂದಿರುಗಿಸಲು ಹಿಂದೇಟು ಹಾಕುತ್ತಿರುವ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರ ಜೈಲುವಾಸ ಅವಧಿಯನ್ನು ಸೋಮವಾರ ವಿಸ್ತರಿಸಲಾಗಿತ್ತು.

ಹೂಡಿಕೆದಾರರಿಗೆ ಹಣ ನೀಡುವ ಬಗ್ಗೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರುವಂತೆ ರಾಯ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಆದರೆ ಹಣ ನೀಡದ ಹಿನ್ನಲೆಯಲ್ಲಿ ಇಂದು ಸುಬ್ರತಾ ರಾಯ್ ಅವರ ಜೈಲುವಾಸದ ಅವಧಿಯನ್ನು ವಿಸ್ತರಿಸಿ, ಮುಂದಿನ ವಿಚಾರಣೆವರೆಗೂ ಜೈಲುವಾಸ ಅನುಭವಿಸಬೇಕು ಎಂದು ಹೇಳಿತ್ತು.

ಸಹಾರಾ ಸಂಸ್ಥೆಯ ಹೂಡಿಕೆದಾರರ 20,000 ಕೋಟಿ ಮೌಲ್ಯದ ಷೇರುಗಳನ್ನು ಹಿಂದಿರುಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಆದರೆ ನ್ಯಾಯಾಲಯದ ಮುಂದೆ ಅವರು ಹಾಜರಾಗಲು ವಿಫಲರಾದ ಹಿನ್ನಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

ತದ ನಂತರ ಪೊಲೀಸರಿಗೆ ಶರಣಾದ ಸುಬ್ರತಾ ರಾಯ್, ನ್ಯಾಯಾಲಯದಲ್ಲಿ ಕ್ಷಮೆಯಾಚಿಸಿದ್ದರು. ಸುಬ್ರತಾ ರಾಯ್ ಅವರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಬಂಧಿಸಲು ಆದೇಶಿಸಿತ್ತು. ಹೂಡಿಕೆದಾರರ ಹಣ ವಾಪಸ್ ನೀಡಿದ ಮೇಲೆ ಸುಬ್ರತಾ ರಾಯ್ ಬಿಡುಗಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ನ್ಯಾಯಾಲಯ ಹೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement