ಡಿಕೆಶಿ ವಿರುದ್ಧ ಸ್ಟಿಂಗ್: ಬಂಧಿತ ಪತ್ರಕರ್ತರಿಗೆ ಜಾಮೀನು
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕುಟುಕು ಕಾರ್ಯಾಚರಣೆ ಮಾಡಲು ಹೋಗಿ ಬಂಧನಕ್ಕೊಳಗಾಗಿದ್ದ ಖಾಸಗಿ...
ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕುಟುಕು ಕಾರ್ಯಾಚರಣೆ ಮಾಡಲು ಹೋಗಿ ಬಂಧನಕ್ಕೊಳಗಾಗಿದ್ದ ಖಾಸಗಿ ಸುದ್ದಿವಾಹಿನಿಯ ಇಬ್ಬರು ವರದಿಗಾರರಿಗೆ ಗುರುವಾರ ಜಾಮೀನು ನೀಡಲಾಗಿದೆ.
ವರದಿಗಾರರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ಕೋರ್ಟ್, ಇಬ್ಬರಿಗೂ 1 ಲಕ್ಷ ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ದೇಶ ಬಿಟ್ಟು ಹೋಗದಂತೆ ಕೋರ್ಟ್ ಆರೋಪಿಗಳಿಗೆ ಸೂಚಿಸಿದೆ.
ಸಚಿವರಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಈ ಇಬ್ಬರು ವರದಿಗಾರರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸುದ್ದಿವಾಹಿನಿಯ ಮುಖ್ಯಸ್ಥರ ಹಾಗೂ ವರದಿಗಾರರ ವಿರುದ್ಧ ಸದಾಶಿವನಗ ಪೊಲೀಸರು ಪ್ರಕರಣ ದಾಖಲಿಸಿದ್ದರು.