ತುಮಕೂರು ಮಾಜಿ ಸಂಸದ ಎಸ್.ಮಲ್ಲಿಕಾರ್ಜುನಯ್ಯ ನಿಧನ
ಅನಾರೋಗ್ಯಕ್ಕೀಡಾಗಿದ್ದ ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಎಸ್.ಮಲ್ಲಿಕಾರ್ಜುನಯ್ಯ ಅವರು ಗುರುವಾರ ನಿಧನರಾಗಿದ್ದಾರೆ...
ತುಮಕೂರು: ಅನಾರೋಗ್ಯಕ್ಕೀಡಾಗಿದ್ದ ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಎಸ್.ಮಲ್ಲಿಕಾರ್ಜುನಯ್ಯ ಅವರು ಗುರುವಾರ ನಿಧನರಾಗಿದ್ದಾರೆ.
82 ವರ್ಷದ ಮಲ್ಲಿಕಾರ್ಜನಯ್ಯ ಅವರನ್ನು ನಗರದ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದರು ಎಂದು ಮೂಲಗಳು ತಿಳಿಸಿದ್ದವು.
ಆದರೆ ತೀವ್ರ ಅನಾರೋಗ್ಯದ ಹಿನ್ನಲೆಯಿಂದ ಇಂದು ಅವರು ನಿಧನರಾಗಿದ್ದಾರೆ.
1991ರಿಂದ 1996ರವರೆಗೆ ಲೋಕಸಭೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತುಮಕೂರು ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾದ ಮಲ್ಲಿಕಾರ್ಜುನಯ್ಯ ಅವರು ಭಾರತೀಯ ಜನಸಂಘದ ರಾಜ್ಯಾಧ್ಯರಾಗಿಯೂ ಸೇವೆ ಸಲ್ಲಿಸಿದ್ದರು. ವಿಧಾನಪರಿಷತ್ತಿನ ಉಪಸಭಾಪತಿಯಾಗಿ ಸೇವೆ ಸಲ್ಲಿಸಿದ್ದಾರೆ.