ದೆಹಲಿ ಗ್ಯಾಂಗ್ ರೇಪ್ ಪ್ರಕರಣ: ಗಲ್ಲು ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್
ದೆಹಲಿ ಗ್ಯಾಂಗ್ ರೇಪ್ ಪ್ರಕರಣದ...
ನವದೆಹಲಿ: ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಸಾಮೂಹಿಕ ಅತ್ಯಾಚಾರ ನಡೆಸಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯ ಸಾವಿಗೆ ಕಾರಣರಾದ ಆರು ಮಂದಿಯಲ್ಲಿ ನಾಲ್ವರಿಗೆ ಸಾಕೇತ್ ಕೋರ್ಟ್ ಮರಣದಂಡನೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ನಾಲ್ವರು ಅಪರಾಧಿಗಳಾದ ವಿನಯ್, ಅಕ್ಷಯ್, ಪವನ್ ಗುಪ್ತಾ ಹಾಗೂ ಮುಖೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅಪರಾಧಿಗಳು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಮೂರ್ತಿ ರೇವ ಖೇಟ್ರಾಪಲ್ ಮತ್ತು ನ್ಯಾಯಾಮೂರ್ತಿ ಪ್ರತಿಭಾ ರಾಣಿ ಅವರನ್ನೊಳಗೊಂಡ ನ್ಯಾಯಾಪೀಠ ಸಾಕೇತ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.
ಪ್ರಕರಣದ ಬಾಲಪರಾಧಿಗೆ ಆ.31ರಂದು ಬಾಲಾಪಾರಾಧಿಗಳ ನ್ಯಾಯಾಲಯವು 3 ವರ್ಷಕ್ಕೆ ಶಿಕ್ಷೆ ವಿಧಿಸಿ ಪರಿವರ್ತನಾ ಕೇಂದ್ರಕ್ಕೆ ರವಾನಿಸಿದೆ.
ಪ್ರಕರಣದ ಮತ್ತೊಬ್ಬ ಆರೋಪಿ ರಾಮ್ ಸಿಂಗ್ ಎಂಬುವವನು ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.
2012 ಡಿಸೆಂಬರ್ 16ರಂದು ಚಲಿಸುತ್ತಿದ್ದ ಬಸ್ನಲ್ಲಿ 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ ಮೇಲೆ ಈ ಆರು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದರು.