ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರೈಲ್ವೆ ನಿಲ್ದಾಣದಲ್ಲಿ ದಾಂಧಲೆ: ಕೇಜ್ರಿ ವಿರುದ್ಧ ಪ್ರಕರಣ ದಾಖಲು

ಚರ್ಚ್‌ಗೇಟ್ ರೈಲ್ವೇ ನಿಲ್ದಾಣದ ಬಳಿ ನಿನ್ನೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ದಾಂಧಲೆ ನಡೆದ ಹಿನ್ನಲೆಯಲ್ಲಿ ಗುರುವಾರ ದೆಹಲಿ...

Mainashree
Updated On : 13 Mar 2014, 6:29 am

ಮುಂಬೈ: ಚರ್ಚ್‌ಗೇಟ್ ರೈಲ್ವೇ ನಿಲ್ದಾಣದ ಬಳಿ ನಿನ್ನೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ದಾಂಧಲೆ ನಡೆದ ಹಿನ್ನಲೆಯಲ್ಲಿ ಗುರುವಾರ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಕಾರ್ಯಕರ್ತರ ವಿರುದ್ಧ ಗುರುವಾರ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕೇಜ್ರಿವಾಲ್ ಅವರು ಮುಂಬೈಗೆ ತೆರಳಿದ್ದರು. ಮುಂಬೈನ ಚರ್ಚ್‌ಗೇಟ್ ರೈಲ್ವೇ ನಿಲ್ದಾಣದಲ್ಲಿ ಕೇಜ್ರಿವಾಲ್ ಬೆಂಬಲಿಗರು ದಾಂದಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೆಟಲ್ ಡಿಟೇಕ್ಟರ್ ಸೇರಿದಂತೆ ಇತರೆ ಉಪಕರಣಗಳನ್ನು ಧ್ವಂಸಗೊಂಡಿದ್ದವು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್ ವಿರುದ್ಧ ಇಂದು ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೆಕ್ಷನ್ 188, 141 ಮತ್ತು 143ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಕೇಜ್ರಿವಾಲ್ ಟ್ರಾಫಿಕ್ ನಿಯಮವನ್ನು ಮುರಿದು, ಆಟೋದಲ್ಲಿ ಪ್ರಚಾರ ರ್ಯಾಲಿ ಕೈಗೊಂಡಿದ್ದಾರೆ ಹಾಗೂ ರೋಡ್ ಶೋ ನಡೆಸಲು ಪಕ್ಷ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡಿಲ್ಲ ಎಂದು ಕೇಜ್ರಿವಾಲ್ ವಿರುದ್ಧ ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement