ಇಶ್ರತ್ ಪ್ರಕರಣ: ಅಮಿತ್ ಶಾಗೆ ನೋಟೀಸ್
ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅಮಿತ್ ಶಾಗೆ ಸಿಬಿಐ ನ್ಯಾಯಾಲಯ ಶುಕ್ರವಾರ...
ಅಹಮದಾಬಾದ್: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅಮಿತ್ ಶಾಗೆ ಸಿಬಿಐ ನ್ಯಾಯಾಲಯ ಶುಕ್ರವಾರ ನೋಟೀಸ್ ನೀಡಿದೆ.
ಮೋದಿ ಆಪ್ತ ಅಮಿತ್ ಶಾ ಅವರ ಹೆಸರು ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಕೇಳಿಬಂದಿತ್ತು. ಇಶ್ರತ್ ಜಹಾನ್, ಜಾವೇದ್ ಸೇರಿದಂತೆ ನಾಲ್ವರನ್ನು ಎನ್ಕೌಂಟರ್ ಮಾಡಲಾಗಿತ್ತು.
ಅಮಿತ್ ಶಾ ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಎನ್ಕೌಂಟರ್ ನಡೆದ ಸಂದರ್ಭದಲ್ಲಿ ಅಮಿತ್ ಶಾ ಗೃಹಮಂತ್ರಿಗಳಾಗಿದ್ದರು. ಆದ್ದರಿಂದ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಾವೇದ್ ಅವರ ತಂದೆ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಅಮಿತ್ ಶಾ ಅವರಿಗೆ ಸಿಬಿಐ ನ್ಯಾಯಾಲಯ ನೋಟೀಸ್ ನೀಡಿದ್ದು, ಮಾರ್ಚ್ 26ರೊಳಗೆ ಉತ್ತರಿಸುವಂತೆ ತಿಳಿಸಿದೆ.