ತೇಜ್ಪಾಲ್ ಜಾಮೀನು ಅರ್ಜಿ ವಜಾ
ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು ಜಾಮೀನು ನೀಡುವಂತೆ ಕೋರಿ ತರುಣ್ ತೇಜ್ಪಾಲ್ ಸಲ್ಲಿಸಿದ್ದ ಅರ್ಜಿಯನ್ನು...
ಪಣಜಿ: ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು ಜಾಮೀನು ನೀಡುವಂತೆ ಕೋರಿ ತರುಣ್ ತೇಜ್ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಜಾಮೀನು ನೀಡಲು ನಿರಾಕರಿಸಿರುವ ಗೋವಾ ಜಿಲ್ಲಾ ನ್ಯಾಯಾಲಯ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲು ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಅವರಿಗೆ ಅನುಮತಿ ದೊರೆತಿದೆ.
ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ದರಿಂದ ತಾಯಿಯ ಭೇಟಿಗೆ ಅನುಮತಿ ನೀಡಬೇಕು ಎಂದು ತೇಜ್ಪಾಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಮೀನು ನಿರಾಕರಿಸಿದ ನ್ಯಾಯಾಲಯ ತಾಯಿ ಭೇಟಿಗೆ ಅನುಮತಿ ನೀಡಿದೆ.
ಗೋವಾದ ಪಂಚತಾರ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್ರನ್ನು ಗೋವಾ ಪೊಲೀಸರು ಬಂಧಿಸಿದ್ದರು.
ಈ ಸಂಬಂಧ ಪೊಲೀಸರು ತೇಜ್ಪಾಲ್ ವಿರುದ್ಧ ಗೋವಾ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.