'ನನ್' ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರಿಗೆ ಶಿಕ್ಷೆ
ಕ್ರೈಸ್ತ ಸನ್ಯಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಪರಾಧಿಗಳೆಂದು ಕೋರ್ಟ್...
ಕತಕ್: ಕ್ರೈಸ್ತ ಸನ್ಯಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಪರಾಧಿಗಳೆಂದು ಕೋರ್ಟ್ ಆದೇಶಿಸಿದ್ದು, 6 ಮಂದಿಯನ್ನು ಖುಲಾಸೆಗೊಳಿಸಿದೆ.
2008ರಲ್ಲಿ ಒಡಿಶಾದ ಕಂದಾಮಾಲ್ನಲ್ಲಿ ನಡೆದ ಕೋಮುಗಲಭೆ ಸಂದರ್ಭದಲ್ಲಿ ಕ್ರೈಸ್ತ ಸನ್ಯಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಅಪರಾಧ ಸಾಬೀತಾಗಿದೆ ಎಂದು ಹೇಳಿದ್ದು, ಆರು ಮಂದಿಯನ್ನು ಖುಲಾಸೆಗೊಳಿಸಿದೆ. ಮೂವರು ಅಪರಾಧಿಗಳಿಗೆ ಶಿಕ್ಷೆ ಪ್ರಕಟಣೆಯನ್ನು ಕಾಯ್ದಿರಿಸಿದೆ.