ಲೋಕಸಮರ: ವಾರಾಣಸಿಯಲ್ಲಿ ಮೋದಿ ವಿರುದ್ಧ ಕೇಜ್ರಿವಾಲ್ ಸ್ಪರ್ಧೆ?
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ..
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ನಿನ್ನೆಯಿಂದ ರಾಜ್ಯ ಪ್ರವಾಸದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು, ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ವಾರಾಣಸಿಯಲ್ಲಿ ತಾವು ಮೋದಿ ವಿರುದ್ಧ ಸ್ಪರ್ಧಿಸುವ ಸಂಗತಿಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ದೆಹಲಿ ವಿಧಾಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಸ್ಪರ್ಧಿಸಿ ಭರ್ಜರಿ ಗೆಲವು ಸಾಧಿಸಿದ್ದ ಕೇಜ್ರಿವಾಲ್ ಈಗ ಮೋದಿಗೆ ಸಡ್ಡು ಹೊಡೆದಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶವನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಬಿಜೆಪಿ, ವಾರಾಣಸಿಯಿಂದ ಮೋದಿಯನ್ನು ಹಾಗೂ ಲಖನೌದಿಂದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.