39ನೇ ಹುಟ್ಟು ಹಬ್ಬ ಆಚರಿಸಿಕೊಂಡ ಪವರ್ ಸ್ಟಾರ್ ಪುನೀತ್
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸೋಮವಾರ 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಸೋಮವಾರ 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಪುನೀತ್ ಅವರು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ನೂರಾರು ಅಭಿಮಾನಿಗಳೊಂದಿಗೆ ಇಂದು ಬೆಳಗ್ಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಬಳಿಕ ಕಂಠೀರವ ಸ್ಟುಡಿಯೋಗೆ ತೆರಳಿ ತಮ್ಮ ತಂದೆಯವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಯೂ ಕೇಕ್ ಕಟ್ ಮಾಡಿ ಅಭಿಮಾನಿಗಳೊಂದಿಗೆ ಸಂಭ್ರಮಿಸಿದರು.
ಹುಟ್ಟು ಹಬ್ಬದ ಸಂಭ್ರಮದ ನಡುವೆಯೇ ಪುನೀತ್ ರಾಜ್ಕುಮಾರ್ ಅವರ ಬಹುನಿರೀಕ್ಷಿತ 'ಧೀರ ರಣವಿಕ್ರಮ' ಚಿತ್ರ ಸೆಟ್ಟೇರಿತು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪವನ್ ಒಡೆಯರ್ ನಿರ್ದೇಶನದ 'ಧೀರ ರಣವಿಕ್ರಮ' ಚಿತ್ರಕ್ಕೆ ಚಾಲನೆ ನೀಡಿದರು.