ಹೋಳಿ: ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್
ಹೋಳಿ ಹಬ್ಬದ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಬೇಡಿ ಎಂದು ಚುನಾವಣಾ ಆಯೋಗ ಎಲ್ಲ ರಾಜಕೀಯ ಪಕ್ಷಗಳಿಗೆ ಆದೇಶ ...
ನವದೆಹಲಿ: ಹೋಳಿ ಹಬ್ಬದ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಬೇಡಿ ಎಂದು ಚುನಾವಣಾ ಆಯೋಗ ಎಲ್ಲ ರಾಜಕೀಯ ಪಕ್ಷಗಳಿಗೆ ಆದೇಶ ನೀಡಿದೆ.
ಹಬ್ಬಗಳ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ನಡೆಸುವುದು ಸರಿಯಲ್ಲ. ತಮ್ಮ ಪಕ್ಷದ ಪ್ರಚಾರಕ್ಕಾಗಿ ಧಾರ್ಮಿಕ ಆಚರಣೆಗಳನ್ನು ಬಳಸಿಕೊಳ್ಳಬಾರದು.
ಆದ್ದರಿಂದ ಹೋಳಿ ಹಬ್ಬಕ್ಕೆ ಯಾವುದೇ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಮಾಡಬಾರದು ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್ ಸಂಪತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಭೋಜನ ಕೂಟ ಏರ್ಪಡಿಸುವುದಾಗಲೀ ಅಥವಾ ಜನರಿಗೆ ಉಚಿತ ಉಡುಗೊರೆ ನೀಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಆ ರಾಜಕೀಯ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಪತ್ ಹೇಳಿದ್ದಾರೆ.