ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜೆಡಿಎಸ್ ಪರ ಇಲ್ಲ ಪ್ರಚಾರ, ಪತ್ನಿ ಪರ ಮಾತ್ರ: ಶಿವರಾಜ್‌ಕುಮಾರ್

ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಆದರೆ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ..

Lingaraj Badiger
Updated On : 18 Mar 2014, 4:28 am

ಬೆಂಗಳೂರು: ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಆದರೆ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಖ್ಯಾತ ನಟ ಶಿವರಾಜ್‌ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಮ್ ಮತ್ತು ಬೆಂಗಳೂರು ವರದಿಗಾರರ ಕೂಟ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಗೀತಾ ಶಿವರಾಜ್ ಕುಮಾರ್ ಹಾಗೂ ಅವರ ಪತಿ ಶಿವರಾಜ್ ಕುಮಾರ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಶಿವರಾಜ್ ಕುಮಾರ್, ನನಗೆ ಎಲ್ಲ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ. ಹೀಗಾಗಿ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಆದರೆ ನನ್ನ ಪತ್ನಿಯ ಪರವಾಗಿ ಪ್ರಚಾರ ಮಾಡುತ್ತೇನೆ ಎಂದರು.

ಡಾ.ರಾಜ್‌ಕುಮಾರ್ ಅವರು ರಾಜಕೀಯಕ್ಕೆ ಬರಬೇಡಿ ಎಂದು ಯಾವತ್ತು ಹೇಳಿಲ್ಲ. ಆದರೆ ವೈಯಕ್ತಿವಾಗಿ ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇರಲಿಲ್ಲ. ರಾಜಕೀಯ ವ್ಯಕ್ತಿಗಳನ್ನು ಅಪ್ಪಾಜಿ ವಿರೋಧಿಸುವುದೇ ಆಗಿದ್ದರೆ ಅವರು ರಾಜಕೀಯ ಕುಟುಂಬದಿಂದ ಗೀತಾ ಅವರನ್ನು ಸೊಸೆಯಾಗಿ ತರುತ್ತಿರಲಿಲ್ಲ ಎಂದರು.

ಗೀತಾ ಅವರು ತಮ್ಮ ತಾಯಿಯ ಆಸೆಯಂತೆ ರಾಜಕೀಯಕ್ಕೆ ಬಂದಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ. ಆದರೆ ಜನರಿಗೆ ತೊಂದರೆಯಾಗುವ ರೀತಿ ಯಾವುದೇ ಕೆಲಸ ಮಾಡುವುದು ಬೇಡ. ಹೃದಯಾಂತರಾಳದಿಂದ ಜನರ ಸೇವೆ ಮಾಡು. ಯಾವುದೇ ಜಾತಿ, ಧರ್ಮಕ್ಕಾಗಿ ಕೆಲಸ ಮಾಡಬೇಡ ಎಂದು ಪತ್ನಿಗೆ ಸಲಹೆ ನೀಡಿರುವುದಾಗಿ ಶಿವರಾಜ್ ಕುಮಾರ್ ತಿಳಿಸಿದರು.

ಇದೇ ವೇಳೆ ನಿಮ್ಮ ಸಹೋದರರಾದ ಪನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಅವರು ನಿಮ್ಮ ಪತ್ನಿಯ ಪರವಾಗಿ ಪ್ರಚಾರ ಮಾಡುತ್ತಾರೆಯೇ? ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಣ್ಣ, ಚುನಾವಣಾ ಪ್ರಚಾರಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು, ಬಂದರೆ ಸ್ವಾಗತ ಎಂದರು.

ಇತರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಪತ್ನಿ ಚುನಾವಣೆಗೆ ನಿಂತಿದ್ದಾರೆ ಎಂಬ ಕಾರಣಕ್ಕೆ ಪ್ರಚಾರಕ್ಕೆ ಹೋಗುತ್ತಿದ್ದೇನೆ ವಿನಃ ಜೆಡಿಎಸ್ ಪಕ್ಷದ ಯಾವುದೇ ನಾಯಕರ ಅಥವಾ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಿಲ್ಲ. ನನಗೆ ರಾಜಕೀಯ ಆಗಿ ಬರುವುದಿಲ್ಲ. ಅಷ್ಟಕ್ಕು ಜೆಡಿಎಸ್ ಪಕ್ಷ ಸೇರಿರುವುದು ನನ್ನ ಪತ್ನಿಯೇ ಹೊರತು ನಾನಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement