ಮೋದಿಗೆ ಕ್ಲೀನ್ಚಿಟ್ ಪ್ರಶ್ನಿಸಿ, ಝಾಕಿಯ ಜಫ್ರಿ ಹೈಕೋರ್ಟ್ ಮೊರೆ
ಅಹಮದಾಬಾದ್: 2002ರ ಗುಜರಾತ್ ಗಲಭೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಮೆಟ್ರೋಪಾಲಿಟನ್ ಕೋರ್ಟ್ ನೀಡಿದ್ದ ಕ್ಲೀನ್ ಚಿಟ್ ಪ್ರಶ್ನಿಸಿ ಮಂಗಳವಾರ ಝಾಕಿಯ ಜಫ್ರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡ(ಎಸ್ಐಟಿ) ನೀಡಿದ್ದ ವರದಿಯನ್ವಯ ಮೆಟ್ರೋಪಾಲಿಟನ್ ಕೋರ್ಟ್ ಕಳೆದ ಡಿಸೆಂಬರ್ನಲ್ಲಿ ಝಾಕಿಯಾ ಝಫ್ರಿಯವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಮೋದಿ ಅವರಿಗೆ ಕ್ಲೀನ್ಚಿಟ್ ನೀಡಿತ್ತು.
2002ರ ಫೆಬ್ರವರಿ 26ರಂದು ಗುಲ್ಬರ್ಗ್ನನಲ್ಲಿ ನಡೆದ ಹತ್ಯಾಕಾಂಡದಲ್ಲಿ ಝಾಕಿಯ ಜಫ್ರಿಯವರ ಪತಿ ಹಾಗೂ ಮಾಜಿ ಕಾಂಗ್ರೆಸ್ ಸಂಸದ ಇಶಾನ್ ಝಫ್ರಿ ಹತ್ಯೆಯಾಗಿದ್ದರು. ತಮ್ಮ ಪತಿ ಸಾವಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಎಸ್ಐಟಿಯ ವರದಿಯನ್ನು ಅಂಗೀಕರಿಸಿರುವ ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಜಫ್ರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.