ಲೋಕಸಭಾ ಚುನಾವಣೆ: 2 ಕ್ಷೇತ್ರಗಳಲ್ಲಿ ಮುಲಾಯಂ ಸ್ಪರ್ಧೆ
ಲಖನೌ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.
ಉತ್ತರಪ್ರದೇಶದ ಅಝಮ್‌ಘರ್ ಮತ್ತು ಮೈನ್‌ಪುರಿ ಕ್ಷೇತ್ರಗಳಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎರಡು ಕ್ಷೇತ್ರಗಳಲ್ಲೂ ಮುಸ್ಲಿಂ ಮತ್ತು ಯಾದವರ ಜನಾಂಗದ ಪ್ರಾಬಲ್ಯ ಹೆಚ್ಚಾಗಿದ್ದು, ಅಭ್ಯರ್ಥಿ ಗೆಲುವುವನ್ನು ಈ ಎರಡು ಜನಾಂಗಗಳು ನಿಯಂತ್ರಿಸುತ್ತವೆ. ಈ ಹಿನ್ನೆಲೆಯಲ್ಲಿ ಯಾದವ ಜನಾಂಗಕ್ಕೆ ಸೇರಿರುವ ಮುಲಾಯಂ ಈ ಕ್ಷೇತ್ರಗಳಿಂದ ಸ್ಪರ್ಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.