ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚಿಕ್ಕಬಳ್ಳಾಪುರದಿಂದ ಹೆಚ್‌ಡಿಕೆ ಸ್ಪರ್ಧೆ ಖಚಿತ

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಖಚಿತವಾಗಿದೆ.

Srinivasa Murthy VN
Updated On : 20 Mar 2014, 7:12 am

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಖಚಿತವಾಗಿದೆ.

ಕಾಂಗ್ರೆಸ್ ಖಾತೆಯಲ್ಲಿರುವ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಹವಣಿಸುತ್ತಿದ್ದ ಜೆಡಿಎಸ್ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿತ್ತು. ಆದರೆ ಇದೀಗ ಸ್ವತಃ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆ ಆಶೀರ್ವದಿಸಿದರೆ ತಮ್ಮ ಸೇವೆ ಮಾಡುವುದಾಗಿ ಹೇಳಿದರು. ಅಲ್ಲದೆ ಇದಕ್ಕೂ ಮೊದಲು ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿಯೂ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಸ್ವತಃ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಈ ನಿರ್ಧಾರವನ್ನು ಘೋಷಿಸಿದ್ದಾರೆ.

ಜಿದ್ದಾಜಿದ್ದಿನ ಕಣವೆಂದೇ ಗುರುತಿಸಲಾಗಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಇದೀಗ ಇಬ್ಬರು ಮಾಜಿ ಮುಖ್ಯಮಂತ್ರಿಗಳು ರಾಜಕೀಯ ಸೆಣಸಾಟಕ್ಕೆ ಸಿದ್ಧವಾಗಿ ನಿಂತಿದ್ದಾರೆ. ಹೆಚ್‌ಡಿಕೆ ಮತ್ತು ವೀರಪ್ಪ ಮೊಯ್ಲಿ ಸ್ಪರ್ಧೆಯಿಂದಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣಾ ಕಾವು ಏರತೊಡಗಿದೆ. ಶೀಘ್ರದಲ್ಲಿಯೇ ಕುಮಾರಸ್ವಾಮಿ ಅವರು ತಮ್ಮ ನಾಮಪತ್ರ ಸಲ್ಲಿಸಿ, ಅಧಿಕೃತ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement