ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜಸ್ವಂತ್ ಬೆಂಬಲಿಗರಿಂದ ಬಿಜೆಪಿ ಕಚೇರಿ ಮೇಲೆ ದಾಳಿ

ಬರ್ಮರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದನ್ನು ...

Rashmi Kasaragodu
Updated On : 22 Mar 2014, 7:34 am

ಬರ್ಮರ್/ ನವದೆಹಲಿ : ಬರ್ಮರ್  ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದನ್ನು ಖಂಡಿಸಿ ಜಸ್ವಂತ್ ಸಿಂಗ್ ಬೆಂಬಲಿಗರು ಜೈಸಲ್ಮೇರ್‌ನಲ್ಲಿರುವ ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಗುಂಪು ಗುಂಪಾಗಿ ಬಂದ ಜಸ್ವಂತ್ ಬೆಂಬಲಿಗರು ಪಕ್ಷದ ಕಚೇರಿಗೆ ನುಗ್ಗಿ ದಾಂಧಲೆ ಮಾಡಿರುವುದಾಗಿ ಬಲ್ಲಮೂಲಗಳು ವರದಿ ಮಾಡಿವೆ.

ಬರ್ಮರ್‌ನಲ್ಲಿ ಟಿಕೆಟ್ ಸಿಗದಿರುವುದಕ್ಕೆ ಅಸಮಧಾನ ವ್ಯಕ್ತ ಪಡಿಸಿದ ಜಸ್ವಂತ್ ಸಿಂಗ್ ಪಕ್ಷದ ವಿರುದ್ಧವೇ ಕಿಡಿ ಕಾರಿದ್ದಾರೆ. ಬಿಜೆಪಿ ಪಕ್ಷದಲ್ಲಿ ಎರಡು ಗುಂಪುಗಳಿದ್ದು ಒಂದು ರಿಯಲ್ ಇನ್ನೊಂದು ನಕಲಿ ಎಂದು ಹೇಳುವ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದೀಗ ಪಕ್ಷದಲ್ಲಿ ನಕಲಿ ರಾಜಕಾರಣಿಗಳದ್ದೇ ಪ್ರಾಬಲ್ಯ ನಡೆಯುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.

ಪಕ್ಷದ ನಡೆಯಿಂದ ಅಸಮಾಧಾನಗೊಂಡಿರುವ ಸಿಂಗ್ ಭಾನುವಾರ ಬಿಜೆಪಿಗೆ ರಾಜಿನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಅದೇ ವೇಳೆ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾರ್ಚ್ 24ರಂದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement