ಪ್ರಮೋದ್ ಮುತಾಲಿಕ್ ಬಿಜೆಪಿಗೆ ಸೇರ್ಪಡೆ
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಬಿಜೆಪಿಗೆ...
ಧಾರವಾಡ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಹಾಗೂ ಈಶ್ವರಪ್ಪ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ರಾಷ್ಟ್ರೀಯತೆಯ ಪರಿಕಲ್ಪನೆ ಬಿಜೆಪಿಯಲ್ಲಿ ಮಾತ್ರ ಇದೆ. ಹೀಗಾಗಿ ನಾನು ಬಿಜೆಪಿ ಸೇರುತ್ತಿದ್ದು, ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವ ಮಹದಾಸೆ ಹೊಂದಿದ್ದೇನೆ ಎಂದರು.
ಇದಕ್ಕೂ ಮುನ್ನ ಬಿಜೆಪಿ ವಿರುದ್ಧ ಸಿಡಿದೆದ್ದ ಪ್ರಮೋದ್ ಮುತಾಲಿಕ್, ಹುಬ್ಬಳ್ಳಿ-ಧಾರವಾಡದಿಂದ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದರು. ಇದೀಗ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಣದಿಂದ ಹಿಂದೆ ಸರಿದಿದ್ದಾರೆ.