ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಐವರು ಮಾಜಿ ಸಿಎಂ ಸೇರಿ 11 ಭ್ರಷ್ಟ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಐವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 11 ಭ್ರಷ್ಟ ..

Lingaraj Badiger
Updated On : 24 Mar 2014, 5:02 am

ಬೆಂಗಳೂರು: ಐವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 11 ಭ್ರಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ.

ಹಿರೇಮಠ ಅವರು ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಭ್ರಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಅಲ್ಲದೆ ಚುನಾವಣೆಯಲ್ಲಿ ಈ ಎಲ್ಲ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡುವುದಾಗಿ ಹಿರೇಮಠ ತಿಳಿಸಿದರು.

5 ಮಾಜಿ ಮುಖ್ಯಮಂತ್ರಿಗಳು
1. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ (ಅಕ್ರಮ ಡಿನೋಟಿಫಿಕೇಶನ್ , ಅಕ್ರಮ ಗಣಿಗಾರಿಕೆ)
2. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ (ಲೋಕಾಯುಕ್ತ ವರದಿಯಲ್ಲಿ ಹೆಸರು)
3. ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ಧರ್ಮಸಿಂಗ್ (ಲೋಕಾಯುಕ್ತ ವರದಿಯಲ್ಲಿ ಹೆಸರು)
4. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಂ.ವೀರಪ್ಪ ಮೊಯಿಲಿ (ಪೋಸ್ಕೋ ಹಗರಣ)
5. ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ()

ಮಾಜಿ ಸಚಿವರು, ಸಂಸದರು
6. ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ
7. ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು
8. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್
9. ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್
10. ಕಾರವಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಶಾಂತ್ ಆರ್.ದೇಶಪಾಂಡೆ
11. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement