ಗೀತಾ ಶಿವರಾಜ್ಕುಮಾರ್ರಿಂದ ನಾಮಪತ್ರ ಸಲ್ಲಿಕೆ
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ..
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಸೋಮವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಗೀತಾ ಶಿವರಾಜ್ ಕುಮಾರ್ ದಂಪತಿ ಇಂದು ಬೆಳಗ್ಗೆ ಕೋಟೆ ಮಾರಿಕಾಂಬ ದೇವಾಲಯ ಹಾಗೂ ಸೇಕ್ರೇಡ್ ಹಾರ್ಟ್ ಚರ್ಚ್ಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಗೀತಾ ಅವರಿಗೆ ಪತಿ ಶಿವರಾಜ್ ಕುಮಾರ್ ಹಾಗೂ ಸಹೋದರ ಮಧು ಬಂಗಾರಪ್ಪ ಹಾಗೂ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಅವರು ಸಾಥ್ ನೀಡಿದರು.