ಚುನಾವಣೆ ನಂತರವೂ ತಾವೇ ಸಿಎಂ: ಸಿದ್ದು
ಲೋಕಸಭಾ ಚುನಾವಣೆಯ ನಂತರವೂ ತಾವೇ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರೆಯುವುದಾಗಿ..
ಮೈಸೂರು: ಲೋಕಸಭಾ ಚುನಾವಣೆಯ ನಂತರವೂ ತಾವೇ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ, ಮುಂದಿನ ಐದು ವರ್ಷಗಳ ಕಾಲ ತಾವೇ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರೆಯುವುದಾಗಿ ತಿಳಿಸಿದರು.
ಇದೇ ವೇಳೆ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ಮೋದಿ ನರಮೇಧ ನಡೆಸಿದ ನರಹರ, ಕೋರ್ಟ್ ಅವರಿಗೆ ಕ್ಲಿನ್ ಚಿಟ್ ನೀಡಿದರೂ ಅವರು ಮುಗ್ಧರಲ್ಲ ಎಂದು ಹೇಳಿದರು.
ನರೇಂದ್ರ ಮೋದಿ ಉದ್ಯಮಿಗಳಿಂದ ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ. ಆ ಹಣವನ್ನು ಈಗ ಚುನಾವಣೆಯಲ್ಲಿ ಬಳಸಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ಮೋದಿ ಪಕ್ಷದಲ್ಲಿನ ಹಿರಿಯರನ್ನು ಕಡೆಗಣಿಸಿದ್ದಾರೆ ಸಿಎಂ ವಾಗ್ದಾಳಿ ನಡೆಸಿದರು.