ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶ್ರೀರಾಮುಲು ಸೇರಿ 8 ಮಂದಿಗೆ ಜಾಮೀನು

ಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ

Lingaraj Badiger
Updated On : 24 Mar 2014, 12:39 pm

ಬಳ್ಳಾರಿ: ಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸೇರಿದಂತೆ 8 ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

2013ರ ವಿಧಾನಸಭೆ ಚುನಾವಣೆ ವೇಳೆ ಅವಧಿ ಮೀರಿ ಪ್ರಚಾರ ಮಾಡಿದ ಆರೋಪದ ಮೇಲೆ ಶ್ರೀರಾಮುಲು ಸೇರಿದಂತೆ 8 ಮಂದಿ ವಿರುದ್ಧ ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನಗರದ ಎರಡನೇ ಹೆಚ್ಚುವರಿ ಸಿವಿಲ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಈವರೆಗೂ ವಿಚಾರಣೆಗೆ ಹಾಜರಾಗದ ಶ್ರೀರಾಮುಲು ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಅವರು ಇಂದು ಖುದ್ದು ಕೋರ್ಟ್ ಹಾಜರಾಗಿ ಜಾಮೀನು ಪಡೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement