ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸರ್ಕಾರಿ ಸೇವೆಗಳಿಗೆ 'ಆಧಾರ್‌' ಆಧಾರ ಏಕೆ: ಸುಪ್ರೀಂ

Vishwanath S
Updated On : 24 Mar 2014, 8:52 am

ನವದೆಹಲಿ: ಸರ್ಕಾರದ ಕೆಲವು ಸೇವೆಗಳಿಗೆ ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಪಡೆಯಬೇಕೆಂಬ ಆದೇಶವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ನ್ಯಾಯಮೂರ್ತಿ ಬಿ.ಎಸ್.ಚವ್ಹಾಣ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಸೂಚನೆ ನೀಡಿದ್ದಾರೆ.

ಆಧಾರ್ ಗುರುತಿನ ಚೀಟಿಗೆ ಸಂವಿಧಾನದ ಮಾನ್ಯತೆ ನೀಡಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ತಳ್ಳಿ ಹಾಕಿದ ನ್ಯಾಯಾಧೀಶರು ಯಾವುದೇ ಸೇವೆಗೆ ಇದು ಕಡ್ಡಾಯ ಬೇಡ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಇಂತಹ ಬೃಹತ್ ಯೋಜನೆಯಲ್ಲಿ ಯಾವುದೇ ರೀತಿಯ ಲೋಪದೋಷ ಉಂಟಾಗಬಾರದು. ಈ ಹಿನ್ನೆಲೆಯಲ್ಲಿ ಆಧಾರ್ ಗುರುತಿನ ಚೀಟಿಗೆ ಸಂವಿಧಾನದ ಮಾನ್ಯತೆ ನೀಡುವಂತೆ ಸರ್ಕಾರ ಮನವಿ ಮಾಡಿತ್ತು.

ಈಗಾಗಲೇ ಕೆಲವು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಆಧಾರ್ ಕಡ್ಡಾಯವಾಗಲಾರದು. ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂತೆಗೆದುಕೊಳ್ಳುವುದು ಉತ್ತಮ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದಕ್ಕೂ ಮುನ್ನ 2013ರಲ್ಲಿ ಅಪೆಕ್ಸ್ ಕೋರ್ಟ್ ಆಧಾರ್ ಗುರುತಿನ ಚೀಟಿ ಕಡ್ಡಾಯಗೊಳಿಸಬಾರದೆಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.ಕೋರ್ಟ್ ಸರ್ಕಾರದ ಯೋಜನೆಗಳಿಗೆ ಇದನ್ನು ಕಡ್ಡಾಯ ಮಾಡುವುದರಿಂದ ನಿಜವಾದ ಫಲಾನುಭವಿಗಳು ಯೋಜನೆ ಪಡೆಯದೆ ವಂಚಿತರಾಗುತ್ತಾರೆ ಎಂದು ನ್ಯಾಯಾಧೀಶರು ಹೇಳಿದ್ದರು.

ಮದುವೆ ನೋಂದಣಿಗೂ ಆಧಾರ್ ಕಡ್ಡಾಯ ಎಂಬ ವಿಷಯ ಕೇಳಿದ ಮೇಲೆ ಆಧಾರ್ ಮಾನ್ಯತೆ ಬಗ್ಗೆ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ ಅವರು ಸುಪ್ರೀಂಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ಹಾಕಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement