ಹಾವೇರಿ, ಧಾರವಾಡ ಕ್ಷೇತ್ರದ ಕೈ ಅಭ್ಯರ್ಥಿ ಹೆಸರು ಪ್ರಕಟ
ಲೋಕಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದಂತೆ ಕಾಂಗ್ರೆಸ್ ತನ್ನ...
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದಂತೆ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಮುಂದಾಗಿದ್ದು, ಕರ್ನಾಟಕದ ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಬಿಡುಗಡೆ ಮಾಡಿದೆ.
ಇಂದು ಹಾವೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯ ಹೆಸರನ್ನು ಎಐಸಿಸಿ ಬಿಡುಗಡೆ ಮಾಡಿದೆ. ಹಾವೇರಿ ಕ್ಷೇತ್ರದಿಂದ ಸಲೀಂ ಅಹಮದ್ ಸ್ಪರ್ಧಿಸುತ್ತಿದ್ದು, ಧಾರವಾಡ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಕಣಕ್ಕಿಳಿಯಲಿದ್ದಾರೆ.