ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹಿಂದೂ ಮಹಾಸಾಗರದಲ್ಲಿ ವಿಮಾನ ಪತನ: ಮಲೇಷ್ಯಾ ಪ್ರಧಾನಿ ಸ್ಪಷ್ಟನೆ

ನಿಗೂಢವಾಗಿ ನಾಪತ್ತೆಯಾಗಿದ್ದ ಮಲೇಷ್ಯಾ ಎಂ.ಹೆಚ್ 370 ವಿಮಾನ ಹಿಂದೂ ಮಹಾಸಾಗರದಲ್ಲಿ ಪತನವಾಗಿದೆ ಎಂದು ಮಲೇಷ್ಯಾ ಪ್ರಧಾನಿ ನಜೀಬ್ ರಜಾಕ್ ಅವರು ಸೋಮವಾರ ತಿಳಿಸಿದ್ದಾರೆ.

Vishwanath S
Updated On : 24 Mar 2014, 8:32 am

ಕೌಲಾಲಂಪುರ: ನಿಗೂಢವಾಗಿ ನಾಪತ್ತೆಯಾಗಿದ್ದ ಮಲೇಷ್ಯಾ ಎಂ.ಹೆಚ್ 370 ವಿಮಾನ ಹಿಂದೂ ಮಹಾಸಾಗರದಲ್ಲಿ ಪತನವಾಗಿದೆ ಎಂದು ಮಲೇಷ್ಯಾ ಪ್ರಧಾನಿ ನಜೀಬ್ ರಜಾಕ್ ಅವರು ಸೋಮವಾರ ತಿಳಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಜಾಕ್, ಮಲೇಷ್ಯಾ ವಿಮಾನ ಹಿಂದೂ ಮಹಾಸಾಗರದಲ್ಲಿ ಪತನವಾಗಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 239 ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ನಿಗೂಢವಾಗಿ ನಾಪತ್ತೆಯಾಗಿದ್ದ ವಿಮಾನದ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ತಜ್ಞರು ವಿಮಾನ ಪತನವಾಗಿದೆ ಎಂಬ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಿಕರೆಲ್ಲರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಯಾಣಿಕರ ಸಂಬಂಧಿಕರಿಗೆ ಮಾಹಿತಿ ರವಾನಿಸಲಾಗಿದೆ. ಅಲ್ಲದೆ ಮಲೇಷ್ಯಾ ವಿಮಾನ ಪತನವಾಗಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ವಿಮಾನಕ್ಕಾಗಿ ಶೋಧ ಕಾರ್ಯ ಮುಂದುವರೆಸುವುದಿಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ.

ಮಾರ್ಚ್ 8 ರಂದು ಕೌಲಾಲಂಪುರದಿಂದ ಬೀಚಿಂಗ್‌ನತ್ತ ಪ್ರಯಾಣಿಸಿದ್ದಿ ಮಲೇಷ್ಯಾ ಎಂ.ಹೆಚ್ 370 ಬೋಯಿಂಗ್ ವಿಮಾನ ನಿಗೂಢವಾಗಿ ನಾಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 25 ದೇಶಗಳು ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದವು. ಕೊನೆಗೆ ಹಿಂದೂ ಮಹಾಸಾಗರದಲ್ಲಿ ವಿಮಾನ ಪತನವಾಗಿರುವುದಾಗಿ ಉಪಗ್ರಹ ಎರಡು ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಇದರಿಂದಾಗಿ ಭಾರತ ಹಾಗೂ ಆಸ್ಟ್ರೇಲಿಯಾ ರಕ್ಷಣಾ ಪಡೆಗಳು ಹಿಂದೂ ಮಹಾಸಾಗರದಲ್ಲಿ ಶೋಧ ಕಾರ್ಯ ನಡೆಸಿದ್ದವು.

ಇಂದು ಚೀನಾದ ನೌಕಾಪಡೆಯಿಂದ ವಿಮಾನ ನಾಪತ್ತೆ ಕಾರ್ಯಾಚರಣೆಗೆ ನಿಯೋಜನೆಯಾಗಿದ್ದ 'ಇಲ್ಯುಷಿನ್-76' ವಿಮಾನವು ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಬಿಳಿ ಬಣ್ಣದ ಚೌಕಾಕಾರದ ಬೃಹತ್ ವಸ್ತುವನ್ನು ಪತ್ತೆ ಮಾಡಿತ್ತು.  ಈ ವಸ್ತುವು ಕಳೆದ ಮಾರ್ಚ್ 8ರಂದು ನಾಪತ್ತೆಯಾಗಿದ್ದ ಮಲೇಷ್ಯನ್ ಏರ್‌ಲೈನ್ಸ್‌ಗೆ ಸೇರಿದ ಎಂ.ಹೆಚ್.370 ಬೋಯಿಂಗ್ ವಿಮಾನದ ತುಂಡಾಗಿರಬಹುದು ಎಂದು ತೀರ್ಮಾನಕ್ಕೆ ಬರಲಾಗಿದೆ ಎಂದು ರಜಾಕ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement