ಆತ್ಮಹತ್ಯೆ ಮಾಡಿಕೊಂಡ ಹಿರಿಯ ಕಾಂಗ್ರೆಸ್ ಮುಖಂಡ
ಮೈಸೂರು: ಕೈ ನರ ಕತ್ತರಿಸಿಕೊಂಡು ಕಾಂಗ್ರೆಸ್ ಹಿರಿಯ ಮುಖಂಡ ಟಿ. ನಾಗರಾಜು ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿಟಿ ಕೋ-ಆಪರೇಟಿವ್ ಬ್ಯಾಂಕಿನ ಮಾಜಿ ಅಧ್ಯಕ್ಷರು ಆಗಿರುವ ಟಿ. ನಾಗರಾಜು ಅವರು ಮೈಸೂರಿನ ಸಿದ್ಧಾರ್ಥ ನಗರದಲ್ಲಿ ಕೈ ನರವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಯಾವ ಕಾರಣ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಲ್ಲ.
ಪ್ರಕರಣವನ್ನು ದಾಖಲಿಸಿಕೊಂಡಿರುವ ನಜರಾಬಾದ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.