ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ರ್ಯಾಲಿಗೆ ಸಂಚು ರೂಪಿಸಿದ್ದ ಪಾಕ್ ಮೂಲದ 2 ಉಗ್ರರ ಬಂಧನ

ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ರ್ಯಾಲಿಯ ವೇಳೆ ಆತ್ಮಾಹುತಿ..

Lingaraj Badiger
Updated On : 27 Mar 2014, 12:57 pm

ಲಖನೌ: ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ರ್ಯಾಲಿಯ ವೇಳೆ ಆತ್ಮಾಹುತಿ ಬಾಂಬ್ ದಾಳಿಗೆ ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಉತ್ತರ ಪ್ರದೇಶ ಉಗ್ರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ನಿನ್ನೆ ತಡರಾತ್ರಿ ಗೋರಖಪುರದಲ್ಲಿ ಪಾಕ್ ಮೂಲದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಬಂಧಿತ ಉಗ್ರರಿಂದ ಒಂದು ಎ.ಕೆ.47 ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನು ಇಂದು ಮಧ್ಯಾಹ್ನ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

ಶಂಕಿತ ಉಗ್ರರು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಯಾಸಿನ್ ಭಟ್ಕಳ್ ಮತ್ತು ರಿಯಾಜ್ ಭಟ್ಕಳ್‌ನೊಂದಿಗೆ ಸಂಪರ್ಕದಲ್ಲಿದ್ದು, ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

ಬಂಧಿತ ಉಗ್ರರನ್ನು ಬರ್ಕಾತ್ ಮತ್ತು ಮುಝಾಮಿಲ್ ಎಂದು ಗುರುತಿಸಲಾಗಿದ್ದು, ಕಳೆದ ಕೆಲವು ತಿಂಗಳಿಂದ ಈ ಇಬ್ಬರು ನೇಪಾಳದಲ್ಲಿ ಅಕ್ರಮವಾಗಿ ನೆಲೆಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement